newsics.com
ತಿರುಪತಿ (ಆಂಧ್ರಪ್ರದೇಶ): ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ್ದರಿಂದ ಎರಡು ಸ್ಥಳಗಳಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಈ ಪೈಕಿ ಐವರು ಮಹಿಳಾ ಭಕ್ತರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದುರಂತದ ಬಗ್ಗೆ ಪ್ರಧಾನಿ ಮೋದಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ಸೂಚಿಸಿದ್ದಾರೆ.
ದುರಂತದ ಬಳಿಕ ಸ್ಥಗಿತಗೊಳಿಸಲಾಗಿದ್ದ ಟಿಕೆಟ್ ವಿತರಣೆ ಗುರುವಾರ (ಜ.9) ಆರಂಭವಾಗಲಿದೆ.
ಸರ್ವದರ್ಶನ ಟಿಕೆಟ್‌ಗಾಗಿ ಭಕ್ತರು ವಿತರಣಾ ಕೇಂದ್ರಗಳತ್ತ ಏಕಾಏಕಿ ನುಗ್ಗಿ ಬಂದ ಕಾರಣ, ಕಾಲ್ತುಳಿತ ಉಂಟಾಗಿದೆ. ಇದರಿಂದ ಹಲವು ಭಕ್ತರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಮೃತ ಭಕ್ತರಲ್ಲಿ ತಮಿಳುನಾಡಿನ ಸೇಲಂ ಮೂಲದ ಮಹಿಳೆ ಕೂಡ ಇದ್ದಾರೆ.
ಏನಾಯ್ತು?
ಜ.10, 11 ಮತ್ತು 12 ರಂದು ವೈಕುಂಠ ಏಕಾದಶಿ ನಿಮಿತ್ತ ಗುರುವಾರ ಬೆಳಗ್ಗೆ 5 ಗಂಟೆಯಿಂದ ವೈಕುಂಠದ್ವಾರ ಸರ್ವದರ್ಶನಕ್ಕೆ ಟಿಕೆಟ್ ನೀಡಲಾಗುವುದು ಎಂದು ಟಿಟಿಡಿ ಪ್ರಕಟಿಸಿತ್ತು.
ಈ ಹಿನ್ನೆಲೆಯಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಬಂದು ಟಿಕೆಟ್‌ಗಾಗಿ ಕಾದು ಕುಳಿತಿದ್ದರು. ಹೆಚ್ಚಿನ ಭಕ್ತರು ಬಂದ ಹಿನ್ನೆಲೆಯಲ್ಲಿ ಟಿಟಿಡಿ ನಿಗದಿತ ಸಮಯಕ್ಕಿಂತ ಮೊದಲೇ ಅಂದರೆ ಬುಕಮಲ ಳ ಟಿಕೆಟ್ ನೀಡಲು ಕೌಂಟರ್ ತೆರೆದಿದೆ. ಈ ವೇಳೆ ಭಕ್ತರು ಟಿಕೆಟ್ ಪಡೆದುಕೊಳ್ಳಲು ಕೌಂಟರ್ಗಳತ್ತ ನುಗ್ಗಿ ಬಂದಿದ್ದಾರೆ. ಈ ವೇಳೆ ಭಾರೀ ಕಾಲ್ತುಳಿತ ಉಂಟಾಗಿದೆ.
ಎಲ್ಲ ಭಕ್ತರನ್ನು ಟಿಕೆಟ್ ಕೌಂಟರ್‌ನ ಹೊರಭಾಗದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಎಲ್ಲರೂ ಸರತಿ ಸಾಲಿನಲ್ಲಿ ಬರಲು ಸಿಬ್ಬಂದಿ ಸೂಚಿಸಿದ್ದಾರೆ. ಈ ವೇಳೆ ಭಕ್ತರು ಏಕಾಏಕಿ ಧಾವಿಸಿ ಬಂದಿದ್ದಾರೆ. ಇದರಿಂದ ಮಹಿಳೆಯರು, ಹಿರಿಯರು ಜನಸಂದಣಿಯಲ್ಲಿ ಸಿಲುಕಿಕೊಂಡಿದ್ದಾರೆ.
Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ, ಹೆಪ್ಪುಗಟ್ಟಿದ ಜಲಮೂಲಗಳು!
ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ