newsics.com
ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದು ಈ ನಿಟ್ಟಿನಲ್ಲಿ ರೋಗಿಯ ಕುಟುಂಬ ಸದಸ್ಯರ ಒಪ್ಪಿಗೆ ಮೇರೆಗೆ ಅವರ ಅಂಗಾಂಗವನ್ನು ಶುಕ್ರವಾರ ರಂದು ದಾನ ಮಾಡಲಾಯಿತು.
ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಶಿವಮೊಗ್ಗ ರಾಗಿಗುಡ್ಡ ನಿವಾಸಿ ರೇಖಾ ಅವರ ಮಿದುಳು ನಿಷ್ಕ್ರಿಯಗೊಂಡಿದ್ದು ಈ ನಿಟ್ಟಿನಲ್ಲಿ ಕುಟುಂಬ ಸದಸ್ಯರ ಒಪ್ಪಿಗೆ ಮೇರೆಗೆ ರೇಖಾ ಅವರ ಅಂಗಾಂಗವನ್ನು ಶುಕ್ರವಾರ ರಂದು ದಾನ ಮಾಡಲಾಯಿತು.
ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಹಿಳೆಯ ಮೆದುಳು ರಕ್ತಸ್ರಾವದಿಂದ ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ದೃಢಪಡಿಸಿದ ಬಳಿಕ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ರೇಖಾ ಅವರ ಯಕೃತ್ ಅನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ಹಾಗೂ ಕಣ್ಣುಗಳ ಕಾರ್ನಿಯಾವನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಶುಕ್ರವಾರ ಮಧ್ಯಾಹ್ನ ರವಾನಿಸಲಾಗಿದೆ