newsics.com
ದೆಹಲಿ: ಚುನಾವಣಾ ಗೊಂದಲದ ನಡುವೆ, ನೀತಿ ಸಂಹಿತೆ ಉಲ್ಲಂಘನೆಗಾಗಿ ದೆಹಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚುನಾವಣಾಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಆರೋಪದ ಮೇಲೆ ಸಿಎಂ ಅತಿಶಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದರೊಂದಿಗೆ ಅತಿಶಿ ಸರ್ಕಾರಿ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ದೆಹಲಿ ಪೊಲೀಸರು ಅತಿಶಿ ಅವರ ವಿರುದ್ಧ ಬಿಎನ್‌ಎಸ್ 223 (ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ವಾಹನ ಬಳಸುವ ಮೂಲಕ ಅತಿಶಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೆಹಲಿ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಲು, ಮೂರನೇ ಭಾರಿಗೆ ಅಧಿಕಾರ ಹಿಡಿಯಲು ಸಿದ್ಧವಾಗಿರುವ ಆಮ್ ಆದ್ಮಿ ಪಕ್ಷವು ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿಳಿಸಿದೆ. ಆರೋಪ ಒಪ್ಪಿಕೊಳ್ಳಲು ನಿರಾಕರಿಸಿದೆ.