newsics.com
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ ಬೆಳಗಾವಿಯ ಕಿತ್ತೂರು ಬಳಿ ನಡೆದಿದೆ.
ಇನ್ನು ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ, ಸಚಿವರ ಬೆನ್ನಿನ ಎರಡು ಮೂಳೆಯಲ್ಲಿ (ಎಲ್1 ಎಲ್4) ಸೀಳು ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಬ್ಬರು ನಾಯಕರು ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಮುಗಿಸಿ ರಸ್ತೆ ಮಾರ್ಗವಾಗಿ ಬೆಳಗಾವಿಯತ್ತ ಬರುತ್ತಿದ್ದರು. ಒಂದೇ ವಾಹನದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ಬರುತ್ತಿದ್ದರು. ನಾಯಿಯೊಂದು ಕಾರಿಗೆ ದಿಢೀರ್ ಅಡ್ಡಲಾಗಿ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.