newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಪಿಎಂಎಲ್ಎ ಕಾಯ್ದೆ ಅಡಿ ಸ್ಥಿರಾಸ್ತಿಗಳ ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮೂಲಕ ಖಚಿತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು.
ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅವರ ದೂರಿನನ್ವಯ ತನಿಖೆ ನಡೆಸಿದ್ದ ಇಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.
https://x.com/dir_ed/status/1880241742190166317
ದಪ್ಪಗಿರುವುದರಿಂದ ಮದುವೆಗೆ ನಿರಾಕರಿಸಿದ ಹುಡುಗಿಯರು: ನೊಂದ ಆಟೋ ಚಾಲಕ ಆತ್ಮಹತ್ಯೆ
Registration rate hike ಹೊಸ ಕಾರು, ಬೈಕ್ ರಿಜಿಸ್ಟ್ರೇಷನ್ ದರ ಹೆಚ್ಚಳ: ಫೆಬ್ರವರಿಯಿಂದಲೇ ಜಾರಿ