ಮೆಟ್ರೋ ಪ್ರಯಾಣಿಕರ ಗಮನಕ್ಕೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ…Namma Metro
newsics.com ಬೆಂಗಳೂರು : ಭಾನುವಾರ (ಜ.19) ನೇರಳೆ ಮಾರ್ಗದಲ್ಲಿ ಮೂರು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ . ಕಬ್ಬನ್ ಪಾರ್ಕ್- ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ 3 ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 7 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ ಎಂದು ನಮ್ಮ ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ
Copy and paste this URL into your WordPress site to embed
Copy and paste this code into your site to embed