newsics.com
ಕಳೆದ ವರ್ಷ ಕೋಲ್ಕತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ದೋಷಿ ಎಂದು ಸಾಬೀತಾಗಿದೆ.
ಸಿಯಾಲ್ಡಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಅನಿರ್ಬನ್ ದಾಸ್ ಅವರು ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಸೋಮವಾರ ಪ್ರಕಟಿಸಲಿದೆ.
ಈ ಪ್ರಕರಣವು ಆಗಸ್ಟ್ 9 ರಂದು ಸ್ನಾತಕೋತ್ತರ ವೈದ್ಯಕೀಯ ತರಬೇತಿದಾರೆಯ ಅತ್ಯಾಚಾರ ಮತ್ತು ಕೊಲೆಯನ್ನು ಒಳಗೊಂಡಿದೆ, ಅವರ ನಿರ್ಜೀವ ದೇಹವು ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿದೆ. ಸೋಮವಾರ ಆರೋಪಿ ಸಂಜಯ್ ರಾವ್ ಗೆ ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, ಕೇವಲ 57 ದಿನಗಳಲ್ಲೇ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರೋಪಿ 33 ವರ್ಷದ ಸಂಜಯ್ ರಾಯ್ ದೋಷಿ ಎಂದು ಹೇಳಿದ್ದಾರೆ. ಆದರೆ ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸುವುದಾಗಿ ತಿಳಿಸಿದೆ.
ನ್ಯಾಯಾಲಯವು ನವೆಂಬರ್ 11 ರಂದು ಪ್ರಕರಣದ ವಿಚಾರಣೆ ಆರಂಭಿಸಿದ್ದು, ಸುಮಾರು 50 ಸಾಕ್ಷಿಗಳಿಂದ ಸಾಕ್ಷ್ಯವನ್ನು ಆಲಿಸಿದೆ ಮತ್ತು ಕಳೆದ ಡಿಸೆಂಬರ್ 21 ರಂದು ರಾಯ್ ನಿಲುವನ್ನು ಪಡೆದುಕೊಳ್ಳಲಾಗಿತ್ತು.
ಇನ್ನು ಆರ್ ಜಿ ಕಾರ್ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂಜಯ್ ರಾವ್ ತಪ್ಪಿತಸ್ಥ ಎಂದು ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ವಿಚಾರಣೆ ಸೋಮವಾರ ನಡೆಯಲಿದೆ.