Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್

newsics.com ಗಂಗಾವತಿ(ಕೊಪ್ಪಳ): ಕನಕಗಿರಿ ತಾಲೂಕಿನ ಬಂಕಾಪುರದ ತೋಳಧಾಮದಲ್ಲಿ ಅಪರೂಪದ ಇಂಡಿಯನ್ ಗ್ರೇ ಉಲ್ಫ್ ಎಂಟು ಮರಿಗಳಿಗೆ ಜನ್ಮ ನೀಡಿದ್ದು, ಎಲ್ಲ ಮರಿಗಳೂ ಸುರಕ್ಷಿತವಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕನಕಗಿರಿ ತಾಲ್ಲೂಕಿನ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ. ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟೇರ್ ಪ್ರದೇಶದಲ್ಲಿರುವ ಬಂಕಾಪುರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದೆ. ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, … Continue reading Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್