YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..

newsics.com ಕಾರವಾರ : ಭೀಕರ ಅಪಘಾತದಲ್ಲಿ ಮೃತಪಟ್ಟ ಹತ್ತೂ ಜನರ ಅಂತ್ಯಕ್ರಿಯೆಯು ಸವಣೂರಿನಲ್ಲಿ ನಡೆಯಿತು. ಅಂತ್ಯಕ್ರಿಯೆಗೂ ಮುನ್ನ ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು.ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ನಿಂತು ಪಾರ್ಥಿವ ಶರೀರಗಳ ವೀಕ್ಷಣೆ ಮಾಡಿದರು. ನಂತರ ಮೃತರ ಮನೆಗಳಿಗೆ ಪಾರ್ಥಿವ ಶರೀರಗಳನ್ನು ತಗೆದುಕೊಂಡು ಹೋಗಲಾಯಿತು. ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು. ಈ ವೇಳೆ ಮೃತ ಕುಟುಂಬದ ಸಂಬಂಧಿಕರ ಆಕ್ರಂದನ ಮಗಿಲು ಮುಟ್ಟಿತ್ತು.