newsics.com
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಹೊಸ ಕಾಯ್ದೆ ಜಾರಿಗೆ ತರಲು ಮುಂದಾಗಿದೆ.
ಮುಂದಿನ ಅಧಿವೇಶನದಲ್ಲಿಯೇ ಈ ಕುರಿತು ವಿಧೇಯಕ ಮಂಡಿಸಲಾಗುವುದು ಎಂದು ಕಾನೂನು ಸಚಿವರಾದ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿವಿಧೆಡೆ ಖಾಸಗಿ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗಿದ್ದು, ಹೊಸ ಕಾನೂನಿನ ಮೂಲಕ ಮೀಟರ್ ಬಡ್ಡಿ ಮಾಫಿಯಾ, ಖಾಸಗಿ ಹಣಕಾಸು ಸಂಸ್ಥೆಗಳ ದಂಧೆಗೆ ಕಡಿವಾಣ ಹಾಕಲಾಗುವುದು. ನಿಗದಿತ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸುವಂತಿಲ್ಲ. ಸಾಲ ವಸೂಲಿಗೆ ಕಿರುಕುಳ ನೀಡಿದಲ್ಲಿ ಕನಿಷ್ಠ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ ವಿಧಿಸುವ ಬಗ್ಗೆ ಕಾನೂನು ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪಾಟೀಲ್ ತಿಳಿಸಿದ್ದಾರೆ.
Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್
ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ ಕಾರ್ ಬಿಡುಗಡೆ… ಬೆಲೆ ಕೇವಲ 3.25 ಲಕ್ಷ ರೂ….electric car
Dr. Rajkumar: ಚೀನಾದ ಸೂಪರ್ ಮಾರ್ಕೆಟ್‌ನಲ್ಲಿ ಅಣ್ಣಾವ್ರ ಹಾಡು! Video viral