newsics.com
ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ಟಾಲಿವುಡ್ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ.
ಚೆಕ್ ಬೌನ್ಸ್ ಕೇಸ್ನಲ್ಲಿ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ದುಬಾರಿ ದಂಡ ವಿಧಿಸಿದ್ದು, ಪಾವತಿಸಲು ತಪ್ಪಿಸಿದರೆ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದಿದೆ.
ಮಂಗಳವಾರ (ಜ.21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್ನಲ್ಲಿ ಹಾಜರಿರಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ.
ರಾಮ್ ಗೋಪಾಲ್ ವರ್ಮಾ ಅವರು ಟಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಇದರ ಜತೆ ವಿವಾದಕ್ಕೂ ಅವರಿಗೂ ಸಾಕಷ್ಟು ನಂಟಿದೆ. ಅವರು ಒಂದಲ್ಲಾ ಒಂದು ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರಿಗೆ ಜೈಲು ಶಿಕ್ಷೆ ಆಗಿರುವುದು ಸಂಚಲನ ಸೃಷ್ಟಿಸಿದೆ.
ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆ ಸಮಯದಲ್ಲಿ ಮಹೇಶ್ಚಂದ್ರ ಮಿಶ್ರಾ ಎಂಬ ವ್ಯಕ್ತಿ ರಾಮಗೋಪಾಲ್ ವರ್ಮಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆರ್ಜಿವಿಗೆ ನೋಟಿಸ್ ನೀಡಿದರೂ ಅವರು ಕೋರ್ಟ್ಗೆ ಬಂದಿರಲಿಲ್ಲ.
Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?
ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ
Kapil Sharma ಹಾಸ್ಯನಟ ಕಪಿಲ್ ಶರ್ಮಾ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಕೊಲೆ ಬೆದರಿಕೆ: FIR ದಾಖಲು