newsics.com
ಮಡಿಕೇರಿ: ನೂತನವಾಗಿ ನಿರ್ಮಿಸಿದ್ದ ಸಿಎನ್ ಜಿ ಗ್ಯಾಸ್ ಘಟಕದಲ್ಲಿ ಅನಿಲ ಸೋರಿಕೆಯಾಗಿರುವ ಘಟನೆ ಕೊಡಗಿನ ಕುಶಾಲನಗರದ ಕೂಡ್ಲುರುವಿನಲ್ಲಿ ನಡೆದಿದೆ.
ಈ ಘಟನೆಯಿಂದ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕ ಸೃಷ್ಟಿಸಿ ಯಾಗಿದೆ.
ಅನಿಲ ಸೋರಿಕೆಯಿಂದಾಗಿ ಸುತ್ತಮುತ್ತ ಪ್ರದೇಸದಲ್ಲಿ ದುರ್ವಾಸನೆ ಬರುತ್ತಿದ್ದು, ಇದರಿಂದಾಗಿ ಸ್ಥಳೀಯ ನಿವಾಸಿಗಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಚಿಕ್ಕಮಕ್ಕಳು ವಾಕರಿಕೆ, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ.
ಘಟಕದವರ ನಿರ್ಲಕ್ಷ್ಯ, ಬೇಜವಾಬ್ದಾರಿಯಿಂದಾಗಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.