newsics.com
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ ಎನ್ನಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡುಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.
ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ, ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.
ಮುಡಾ ಹಗರಣ ಸಂಬಂಧ ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಈ ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.
ಅದಕ್ಕೂ ಮೊದಲು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ.
Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್ನಲ್ಲಿ ಬೇಯಿಸಿ ನದಿಗೆಸೆದ ಮಾಜಿ ಯೋಧ!
ಸ್ನೇಹಿತನ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು; ಸುದ್ದಿಗೋಷ್ಠಿ ಕರೆದ ಜನಾರ್ಧನ ರೆಡ್ಡಿ
KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ