ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ

newsics.com ಭಂಡಾರಾ(ಮಹಾರಾಷ್ಟ್ರ): ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಫಡ್ನವಿಸ್, ಘಟನಾ ಸ್ಥಳದಿಂದ ಐವರನ್ನು ರಕ್ಷಿಸಲಾಗಿದೆ … Continue reading ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ