Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shooting permission ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ‌ ಕಡ್ಡಾಯ: ಸಚಿವ ಖಂಡ್ರೆ ಆದೇಶ
ಕರ್ನಾಟಕಪ್ರಮುಖ

Shooting permission ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ‌ ಕಡ್ಡಾಯ: ಸಚಿವ ಖಂಡ್ರೆ ಆದೇಶ

Share
1 Min Read
SHARE

newsics.com

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಅಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸಚಿವ ಖಂಡ್ರೆ ಸೂಚಿಸಿದ್ದಾರೆ.

ಅನುಮತಿ ಇಲ್ಲದೆ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಹಾಗೂ ‘ಕಾಂತಾರ -1’ ಸಿನಿಮಾ ಚಿತ್ರೀಕರಣ ನಡೆಸುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ. ಅನುಮತಿ ಕಡ್ಡಾಯಗೊಳಿಸಲು ನಿರ್ದೇಶನ ನೀಡಿದ್ದಾರೆ.

‘ಟಾಕ್ಸಿಕ್’ ಮತ್ತು ‘ಕಾಂತಾರ -1’ ಇವೆರಡು ಬಹುನಿರೀಕ್ಷಿತ ಚಿತ್ರಗಳಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳುತ್ತಿವೆ.

‘ಕಾಂತಾರ ಚಾಪ್ಟರ್ 1’ ಹಾಗೂ ‘ಟಾಕ್ಸಿಕ್’ ಸಿನಿಮಾಗಳ ಶೂಟಿಂಗ್ ವೇಳೆ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ‘ಟಾಕ್ಸಿಕ್’ ತಂಡದವರು ಮರ ಕಡಿದ ಆರೋಪ ಹೊತ್ತರೆ, ‘ಕಾಂತಾರ’ ತಂಡದವರು ಬಾಂಬ್ ಸ್ಫೋಟ ಮಾಡಿದ ಹಾಗೂ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಎದುರಿಸಿದ್ದರು.

Premature Childbirth ಅಮೆರಿಕ ಪೌರತ್ವಕ್ಕಾಗಿ ಭಾರತೀಯರ ಹರಸಾಹಸ: ಅವಧಿಪೂರ್ವ ಹೆರಿಗೆಗೆ ನಿರ್ಧಾರ

Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ

Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ

TAGGED:Government permission for shooting in the forest: Minister Khandre order
Share This Article
Facebook Twitter Copy Link Print
Previous Article Premature Childbirth ಅಮೆರಿಕ ಪೌರತ್ವಕ್ಕಾಗಿ ಭಾರತೀಯರ ಹರಸಾಹಸ: ಅವಧಿಪೂರ್ವ ಹೆರಿಗೆಗೆ ನಿರ್ಧಾರ
Next Article Supreme notice to Darshan ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?