Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…
ದೇಶ

MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…

Share
1 Min Read
SHARE

newsics.com

ನವದೆಹಲಿ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟೆಯಲ್ಲಿ ಇತ್ತೀಚೆಗೆ ನಡೆದ ಗೃಹಿಣಿ ವೆಂಕಟಮಾಧವಿಯ ಭೀಕರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ಆಘಾತಕಾರಿ ಸಂಗತಿಗಳು ಸಿಕ್ಕಿವೆ.

ಜನವರಿ 15 ರಂದು ವೆಂಕಟೇಶ್ವರನಗರ ಕಾಲೋನಿಯಲ್ಲಿ ಪತ್ನಿ ವೆಂಕಟಮಾಧವಿಯನ್ನು ಕೊಲೆ ಮಾಡಿದ ಪತಿ ಗುರುಮೂರ್ತಿ, ಯಾವ ಸಾಕ್ಷಿಗಳು ಸಿಗಬಾರದು ಎಂಬ ಕಾರಣದಿಂದ ಪತ್ನಿಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ಹಾಕಿ ಕುದಿಸಿ, ಬಳಿಕ ಬೇಯಿಸಿದ ದೇಹದ ಭಾಗಗಳನ್ನು ಪಕ್ಕದ ಕೆರೆಯಲ್ಲಿ ಬಿಸಾಕಿ ಬಂದಿದ್ದ. ಕಬ್ಬಿಣದ ರಾಡ್ ಸಹಾಯದಿಂದ ಮೃತದೇಹದ ಮೂಳೆಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ್ದು, ಕೃತ್ಯಕ್ಕೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆ ಬಳಿಕ ಆರೋಪಿ ತನ್ನ ಮೇಲೆ ಅನುಮಾನ ಬರಬಾರದೆಂದು ತನ್ನ ಪೋಷಕರೊಂದಿಗೆ ತೆರಳಿ ಮೀರ್‌ಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ.

ಆರೋಪಿ ಪತಿ ಗುರುಮೂರ್ತಿ ತನ್ನ ವಿವಾಹೇತರ ಸಂಬಂಧದ ಸಲುವಾಗಿಯೇ ಪತ್ನಿ ವೆಂಕಟಮಾಧವಿಯನ್ನು ಭೀಕರವಾಗಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪತಿಯ ವಿವಾಹೇತರ ಸಂಬಂಧವೇ ಈ ಕೊಲೆಗೆ ಕಾರಣ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಅನ್ನೋದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share This Article
Facebook Twitter Copy Link Print
Previous Article Padma Awards 2025: ರಾಜ್ಯದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಗೌರವ
Next Article padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?