newsics.com
ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿ ಶೀಟರ್ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಸಂದ್ರದಲ್ಲಿ ನಡೆದಿದೆ.
ಮಾಜಿ ರೌಡಿಶೀಟರ್ ವೆಂಕಟೇಶ್ ಕೊಲೆಯಾಗಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ, ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಂತೆ ಬೀದಿಯಲ್ಲಿ ವೆಂಕಟೇಶನ ಹತ್ಯೆಯಾಗಿದೆ. 10 ವರ್ಷದ ಹಿಂದೆ ಕೊಲೆ ಪ್ರಕರಣದ ಆರೋಪಿಯಾಗಿದ್ದ ವೆಂಕಟೇಶ ನಂತರ ಯಾವುದೇ ಚಟುವಟಿಕೆಯಲ್ಲಿ ಇರಲಿಲ್ಲ. ಪಕ್ಕ ಪ್ಲಾನ್ ಮಾಡಿ ವೆಂಕಟೇಶ್ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.