ದೇವರಿಗೆ ಬಿಟ್ಟಿದ್ದ ಗೂಳಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ

newsics.com ಮೈಸೂರು: ದೇವರಿಗೆ ಹರಕೆಗೆ ಬಿಟ್ಟಿದ್ದ ಗೂಳಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹನಗಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳು ಗೂಳಿಯ ಹಿಂಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಗಾಯಗೊಂಡ ಗೂಳಿಗೆ ಸ್ಥಳೀಯರು ಅರಿಶಿಣ ಹಚ್ಚಿ ಚಿಕಿತ್ಸೆ ಕೊಡಿಸಿದ್ದಾರೆ. ರಾಜ್ಯದಲ್ಲಿ ಗೋವುಗಳ ಮೇಲೆ ಸಾಲು ಸಾಲು ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.