newsics.com
ಅಮೆರಿಕ: ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ಗುರುವಾರ ಸಣ್ಣ ವಿಮಾನವೊಂದ ಪತನಗೊಂಡಿದೆ. 60ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ವಿಮಾನ ನಿಲ್ದಾಣದ ಮೇಲೆ ವಿಮಾನ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ. ಕೆಲವೇ ಕ್ಷಣಗಳಲ್ಲಿ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಗೆ ವಿಮಾನ ಅಪ್ಪಳಿಸಿದೆ.
ರೇಗನ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನವು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ಕ್ಷಣಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳು ವೈರಲ್ ಆಗಿವೆ. ಈ ಮಧ್ಯೆ, ತುರ್ತು ಸಿಬ್ಬಂದಿ ಘಟನೆಗೆ ಸ್ಪಂದಿಸಿದ್ದರಿಂದ ವಿಮಾನ ನಿಲ್ದಾಣದಲ್ಲಿ ಎಲ್ಲಾ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಗಳನ್ನು ಸ್ಥಗಿತಗೊಳಿಸಲಾಗಿತ್ತು. ಘಟನೆಯಲ್ಲಿ ಸಾವು ನೋವಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
https://twitter.com/i/status/1884791951679275128
ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಮರ್ಯಾದಾ ಹತ್ಯೆ: ನಾಲ್ವರಿಗೆ ಮರಣದಂಡನೆ ಶಿಕ್ಷೆ
Maha Kumbh Mela ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ