newsics.com
ಬೆಂಗಳೂರು : ಫೆಬ್ರವರಿ ಮೊದಲ ವಾರದಲ್ಲೇ ಭರ್ಜರಿ ಮಳೆ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಇಷ್ಟೇ ಅಲ್ಲ, ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಜತೆಗೆ ತೀವ್ರವಾಗಿ ಮಳೆ ಆಗಲಿದೆ. ಹಾಗೆಯೇ ಫೆಬ್ರವರಿ 1 ಮತ್ತು 2ನೇ ತಾರೀಖು ರಾಜ್ಯದ ಹಲವು ಭಾಗಗಳಲ್ಲಿ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಇರಲಿದೆ. ಹಾಗೆಯೇ ಮಳೆಯೊಂದಿಗೆ ಭೀಕರ ಚಳಿ ಇರಲಿದೆ. ಕರ್ನಾಟಕದ ಹಲವೆಡೆ ಫೆಬ್ರವರಿ 1ರಂದು ಭಾರೀ ಮಳೆ ಬೀಳುವ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಭಾಗಗಳಲ್ಲಿ ಮಳೆ ಜೋರಾಗಿರಲಿದೆ. ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆಯಲ್ಲೂ ಮಳೆ ಹೆಚ್ಚಾಗಿರಲಿದೆ.
ರಾಮನಗರ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆ ಆಗಲಿದೆ.