newsics.com
ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.
ಬಿಹಾರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಚಿವೆ ಸೀತಾರಾಮನ್ ತಿಳಿಸಿದ್ದಾರೆ. ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕ ಬ್ಯಾಂಕ್‌ಗಳ ಮೂಲಕ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸೌಲಭ್ಯಗಳ ವಿಸ್ತರಣೆಯಾಗುತ್ತದೆ.
ಹಿರಿಯ ನಾಗರಿಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ಹಿರಿಯ ನಾಯಕರಿಗೆ 1ಲಕ್ಷ ವರೆಗೆ ಟಿಡಿಎಸ್ ವಿನಾಯಿತಿಯನ್ನು ನೀಡಲಾಗಿದೆ. 12 ಲಕ್ಷದವರೆಗೂ ಆದಾಯ ತೆರಿಗೆ ಇರುವುದಿಲ್ಲ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದ ವಿಮಾ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಬರಲಿದೆ. ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಿತಿಯನ್ನು ಶೇ.74 ರಿಂದ ಶೇ. 100 ಕ್ಕೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಘೋಷಿಸಿದ್ದಾರೆ. ಈ ನಿರ್ಧಾರವು ಹೂಡಿಕೆದಾರರಿಗೆ ಹೊಸ ಅವಕಾಶಗಳನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತದ ವಿಮಾ ಉದ್ಯಮವನ್ನು ಮತ್ತಷ್ಟು ಬಲಪಡಿಸುತ್ತದೆ. ಈ ಹೊಸ ನೀತಿಯ ಅಡಿಯಲ್ಲಿ, ತಮ್ಮ ಸಂಪೂರ್ಣ ಪ್ರೀಮಿಯಂ ಅನ್ನು ಭಾರತದಲ್ಲಿ ಹೂಡಿಕೆ ಮಾಡುವ ಕಂಪನಿಗಳು ಈ ಹೆಚ್ಚಿದ ಮಿತಿಯ ಲಾಭವನ್ನು ಪಡೆಯುತ್ತವೆ.
ವಿಮಾ ವಲಯದಲ್ಲಿ ವಿದೇಶಿ ಹೂಡಿಕೆ ಮೇಲಿನ ಮಿತಿಯನ್ನು ತೆಗೆದುಹಾಕುವುದರೊಂದಿಗೆ, ಈ ವಲಯದಲ್ಲಿ ಹೂಡಿಕೆಯು ಹೆಚ್ಚಾಗುವ ನಿರೀಕ್ಷೆಯಿದೆ. ಹೆಚ್ಚುತ್ತಿರುವ ವಿದೇಶಿ ಹೂಡಿಕೆಯೊಂದಿಗೆ, ವಿಮಾ ವಲಯದಲ್ಲಿ ಉದ್ಯೋಗಕ್ಕಾಗಿ ದೊಡ್ಡ ಅವಕಾಶಗಳನ್ನು ಸಹ ಸೃಷ್ಟಿಸಬಹುದು.
ಬಜೆಟ್ ನ ಪ್ರಮುಖ ಮುಖ್ಯಾಂಶಗಳು
- ತೆರಿಗೆ, ನಗರಾಭಿವೃದ್ಧಿ, ಗಣಿಗಾರಿಕೆ, ಹಣಕಾಸು ವಲಯ, ವಿದ್ಯುತ್ ಮತ್ತು ನಿಯಂತ್ರಕ ಸುಧಾರಣೆಗಳು ಸೇರಿ 6 ಕ್ಷೇತ್ರಗಳ ಸುಧಾರಣೆಗೆ ಬಜೆಟ್ನಲ್ಲಿ ಘೋಷಣೆ
- ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುವ ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆಯನ್ನು ಹಣಕಾಸು ಸಚಿವೆ ಘೋಷಣೆ
- ಯುವಕರು, ಮಹಿಳೆಯರು ಮತ್ತು ರೈತರನ್ನು ಕೇಂದ್ರೀಕರಿಸುವ ಗ್ರಾಮೀಣ ಸಮೃದ್ಧಿ ಕಾರ್ಯಕ್ರಮ ಪ್ರಾರಂಭ
- ತೊಗರಿ, ಉದ್ದು ಮತ್ತು ಹೆಸರು ಬೇಳೆ ಮೇಲೆ ವಿಶೇಷ ಗಮನ ಹರಿಸಿ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರಕ್ಕಾಗಿ 6 ವರ್ಷಗಳ ಕಾರ್ಯಕ್ರಮ ಪ್ರಾರಂಭ
- ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮ ಘೋಷಣೆ
- ಬೀಜದ ಉತ್ಪಾದನೆ ಮತ್ತು ಸಂಸ್ಕರಣೆಯನ್ನು ಸುಧಾರಿಸಲು ಬಿಹಾರದಲ್ಲಿ ಮಖಾನಾ ಮಂಡಳಿ ಸ್ಥಾಪನೆ
- ಹೆಚ್ಚಿನ ಇಳುವರಿ ನೀಡುವ ಬೀಜಗಳ ರಾಷ್ಟ್ರೀಯ ಮಿಷನ್ ಪ್ರಾರಂಭ
- ಹತ್ತಿ ಉತ್ಪಾದನೆ ಉತ್ತೇಜಿಸಲು 5 ವರ್ಷಗಳ ಯೋಜನೆ ಘೋಷಿಸಿದ ಹಣಕಾಸು ಸಚಿವ ಸೀತಾರಾಮನ್
- ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಬಡ್ಡಿ ಸಬ್ಸಿಡಿ ಯೋಜನೆಯ ಮಿತಿಯನ್ನು ಸರ್ಕಾರ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ
- ಗುಣಮಟ್ಟದ ಉತ್ಪನ್ನಗಳೊಂದಿಗೆ, 45%ರಷ್ಟು ರಫ್ತಿನ ಮೇಲೆ ಎಂಎಸ್ಎಂಇಗಳೇ ಜವಾಬ್ದಾರರರು. ಎಂಎಸ್ಎಂಇ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿ ಹೆಚ್ಚಳ
- ಭಾರತ ಅಂಚೆ ಇಲಾಖೆಯು 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳನ್ನು ಹೊಂದಿರುವ ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ರೂಪಾಂತರಗೊಳ್ಳಲಿದೆ, ಇದು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಲಿದೆ.