newsics.com
ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನಿಗದಿಯಾಗಿದ್ದ ಎಲ್ಲ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಕಾಲು ನೋವಿನಿಂದ ಬಳಲುತ್ತಿರುವ ಅವರು ಮಣಿಪಾಲ ಆಸ್ಪತ್ರೆಗೆ ದಿಢೀರ್ ದಾಖಲಾಗಿ, ಅಷ್ಟೇ ಬೇಗ ಡಿಸ್ಚಾರ್ಜ್ ಆಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಯೋಸಹಜವಾಗಿ ಮಂಡಿ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುವುದಕ್ಕೆಂದು ದಿಢೀರನೇ ಎಲ್ಲ ಕಾರ್ಯಕ್ರಮಗಳನ್ನು ಹಾಗೂ ರಾಜ್ಯ ಪ್ರವಾಸವನ್ನು ರದ್ದುಗೊಳಿಸಿ ಆಸ್ಪತ್ರೆಗೆ ಭಾಜುವಾರ ಬೆಳಗ್ಗೆ ದಾಖಲಾಗಿದ್ದರು.
ಭಾನುವಾರ ಬೆಳಗ್ಗೆ ಉಪಾಹಾರದ ನಂತರ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ಹೋಗುವುದಕ್ಕೆ ನಿರ್ಧರಿಸಿದ್ದಾರೆ. ಬೆಂಗಳೂರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಈ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಅವರು ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.