newsics.com
ತಮಿಳುನಾಡು : ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ.
ಸಂಬಂಧಿ ಯುವಕನ ಜೊತೆ ವಿದ್ಯಾರ್ಥಿನಿಗೆ ಪ್ರೇಮಾಂಕುರವಾಗಿತ್ತು. ಇದು ಮುಂದುವರಿದು ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದರಿಂದ ಯುವತಿ ಗರ್ಭಿಣಿಯಾಗಿದ್ದಳು.
ಕಾಲೇಜಿನ ಶೌಚಾಲಯಕ್ಕೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗೂ ಗೊತ್ತಾಗದಂತೆ ನವಜಾತ ಶಿಶುವನ್ನು ಅಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟು, ಕ್ಲಾಸ್ರೂಂಗೆ ತೆರಳಿದ್ದಳು. ಆ ಬಳಿಕ ತೀವ್ರ ರಕ್ತಸ್ರಾವವಾಗಿ ಕ್ಲಾಸ್ರೂಂನಲ್ಲಿ ಪ್ರಜ್ಞೆತಪ್ಪಿ ಬಿದ್ದಾಗ ಆಂಬ್ಯುಲೆನ್ಸ್ ಮೂಲಕ ಕುಂಭಕೋಣಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆರಿಗೆ ಆಗಿರುವ ಮಾಹಿತಿ ಮತ್ತು ಮಗುವನ್ನು ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟಿರುವುದು ಗೊತ್ತಾಗಿತ್ತು. ಆಗ ವೈದ್ಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು, ಕಾಲೇಜು ಸಿಬ್ಬಂದಿ ಶೌಚಾಲಯದ ಕಸದ ಬುಟ್ಟಿಯಲ್ಲಿದ್ದ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ತಾಯಿ, ಮಗುವಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.
ಯುವಕ ಬಂದ ಬಳಿಕ ಮದುವೆ ಮಾಡುವ ಬಗ್ಗೆ ಎರಡೂ ಕುಟುಂಬಸ್ಥರ ಜೊತೆ ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.