newsics.com
ಬೆಂಗಳೂರು : ಏರೋ ಇಂಡಿಯಾ 2025ರ ಹಿನ್ನೆಲೆ ಫೆ.5ರಿಂದ ಫೆ.14ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬೆಂಗಳೂರು ಏರ್‌ಪೋರ್ಟ್ ಕಾರ್ಯಾಚರಣೆಯು ಫೆ.5ರಿಂದ ಫೆ.15ರವರೆಗೆ 10 ದಿನಗಳಲ್ಲಿ ಬೇರೆಬೇರೆ ಸಮಯದಲ್ಲಿ ಬಂದ್ ಆಗಿರಲಿದೆ. ಆ ವೇಳಾಪಟ್ಟಿ ವಿವರ ಈ ಕೆಳಗೆ ನೀಡಲಾಗಿದೆ.
