newsics.com
ಬೆಂಗಳೂರು : ಐಪಿಎಸ್ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಗುದ್ದಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿವೆ. ವಿಚಾರಣೆ ವೇಳೆ ಕೋರ್ಟ್ ಇಬ್ಬರು ಅಧಿಕಾರಿಗಳಿಗೆ ಮಹತ್ವದ ಸಲಹೆಯೊಂದನ್ನು ನೀಡಿದೆ.
ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಅವರು ಕಿವಿ ಮಾತು ಹೇಳಿದರು. ಅಲ್ಲದೇ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ಸಲಹೆ ನೀಡಿ ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.
ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ಸಹ ಇಬ್ಬರು ಅಧಿಕಾರಿಗಳ ಮಧ್ಯ ರಾಜಿ ಸಂಧಾನ ಮಾಡಲು ಪ್ರಯತ್ನ ನಡೆಸಿದೆ. ಹೀಗಾಗಿ ಕೆಲ ಕಿವಿ ಮಾತು ಜೊತೆಗೆ One Minute Apology ಪುಸ್ತಕ ಓದುವಂತೆ ಸಲಹೆ ನೀಡಿದೆ. ಆದ್ರೆ, ಈ ಇಬ್ಬರು ಅಧಿಕಾರಿಗಳು ರಾಜಿಗೆ ಒಪ್ಪಿಕೊಳ್ಳುತ್ತಾರಾ ಅಥವಾ ಕಾನೂನು ಹೋರಾಟ ಮುಂದುವರಿಸುತ್ತಾರಾ ಎನ್ನುವುದು ಕಾದುನೋಡಬೇಕಿದೆ. ಇಬ್ಬರು ಅಧಿಕಾರಿಗಳು ರಾಜಿ ಸಂಧಾನಕ್ಕೆ ಒಪ್ಪದಿದ್ದರೆ ಕೋರ್ಟ್ ಏನು ಆದೇಶ ನೀಡುತ್ತೆ ಎನ್ನುವುದು ಸಹ ಕುತೂಹಲಕ್ಕೆ ಕಾರಣವಾಗಿದೆ.