newsics.com
ಗದಗ: ಔಷಧೀಯ ಸಸ್ಯಕಾಶಿ ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರ ತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಪ್ರದೇಶ ಸುಟ್ಟುಹೋಗಿದೆ.
ಬೆಂಕಿಯಿಂದ ಸರೀಸೃಪಗಳು, ವನ್ಯಜೀವಿಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ. ಆರ್‌ಎಫ್‌ಒ ಮಂಜುನಾಥ ಮೆಗಲಮನಿ ನೇತೃತ್ವದಲ್ಲಿ ಹಲವು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.
EXIT POLL result ಬಿಜೆಪಿಗೆ ದೆಹಲಿ ಗದ್ದುಗೆ? ಆಪ್‌ಗೆ ಕಾದಿದ್ಯಾ ಆಪತ್ತು?
ನಟಿ ಜಯಮಾಲಾ ಮಗಳು ಮದುವೆಯಾಗ್ತಿರೋ ಹುಡುಗ ಇವ್ರೇ ನೋಡಿ…actress soundarya wedding