ಕಪ್ಪತ್ತಗುಡ್ಡಕ್ಕೆ ಬೆಂಕಿ: ಔಷಧೀಯ ಸಸ್ಯಗಳು, ಪ್ರಾಣಿ- ಪಕ್ಷಿಗಳು ಬೆಂಕಿಗಾಹುತಿ

newsics.com ಗದಗ: ಔಷಧೀಯ ಸಸ್ಯಕಾಶಿ ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದೆ. ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ,‌ ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರ ತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಪ್ರದೇಶ ಸುಟ್ಟುಹೋಗಿದೆ. ಬೆಂಕಿಯಿಂದ ಸರೀಸೃಪಗಳು, ವನ್ಯಜೀವಿಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ. ಆರ್‌ಎಫ್‌ಒ ಮಂಜುನಾಥ ಮೆಗಲಮನಿ ನೇತೃತ್ವದಲ್ಲಿ ಹಲವು ಅರಣ್ಯ ಇಲಾಖೆ‌ ಸಿಬ್ಬಂದಿ ಹಾಗೂ … Continue reading ಕಪ್ಪತ್ತಗುಡ್ಡಕ್ಕೆ ಬೆಂಕಿ: ಔಷಧೀಯ ಸಸ್ಯಗಳು, ಪ್ರಾಣಿ- ಪಕ್ಷಿಗಳು ಬೆಂಕಿಗಾಹುತಿ