Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ

newsics.com ಬೆಂಗಳೂರು: ನಗರದಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಮಾಗಡಿ ರಸ್ತೆಯ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ದುರಂತದಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ಸತೀಶ್ ಎಂಬುವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. KSRTC ಬಸ್ ಪಲ್ಟಿ: … Continue reading Fire tragedy ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಇಬ್ಬರಿಗೆ ಗಾಯ