newsics.com
ಹಾವೇರಿ: ಜಿಲ್ಲೆಯ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಭಾರೀ ಅವಗಢ ಸಂಭವಿಸಿದೆ.
ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ ಬಕೆಟ್ ಕಟ್ ಆಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವು ಕಂಡಿದ್ದು, ಕೂಸನೂರು ಸ್ವಾಮೀಜಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಶೇಷಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ 42 ವರ್ಷದ ಮಂಜು ಪಾಟೀಲ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಂಜು ಬಡಿಗೇರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶೇಷಗಿರಿ ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೋಪುರದ ಮೇಲೆ ಇಡುವ ಕಳಸ ಹಿಡಿದು ಕ್ರೇನ್ ಮೂಲಕ ದೇವಸ್ಥಾನದ ಗೋಪುರದ ಹತ್ತಿರ ಹೋಗುತ್ತಿದ್ದಂತೆ ಕ್ರೇನ್ ಬಕೆಟ್ ಕಳಚಿ ಬಿದ್ದಿದೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬಹುಶಃ ಕಳಸ ಎದೆಗೆ ಚುಚ್ಚಿಯೇ ಸಾವು ಕಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Attack on pregnant women ಗರ್ಭಿಣಿ ಮೇಲೆ ಹಲ್ಲೆ ನಡೆಸಿ ಚಲಿಸುವ ರೈಲಿನಿಂದ ಹೊರ ತಳ್ಳಿದ ದುಷ್ಕರ್ಮಿಗಳು