newsics.com
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಭಾನುವಾರದಿಂದ (ಫೆ.9) ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲಿದೆ.
ಈ ಸಂಬಂಧ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಅಧಿಕೃತ ಆದೇಶ ಹೊರಡಿಸಿದೆ.
ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಪರಿಷ್ಕೃತ ದರ ಜಾರಿ ಆಗಲಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ.
ಮೆಟ್ರೋ ರೈಲ್ವೆ 2002ರ ಸೆಕ್ಷನ್ 34 ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ 2024 ಅಕ್ಟೋಬರ್ 7ರಂದು ಹೈಕೋರ್ಟ್ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗಿತ್ತು. ದರ ಪರಿಷ್ಕರಣೆ ಸಮಿತಿಯು ಪರಿಷ್ಕೃತ ದರದ ಶಿಫಾರಸು ವರದಿಯನ್ನು ಡಿಸೆಂಬರ್ 16ರಂದು ಸಲ್ಲಿಸಲಾಗಿತ್ತು.
ಪರಿಷ್ಕೃತ ದರ
0-2 ಕಿಲೋ ಮೀಟರ್ ಪ್ರಯಾಣಕ್ಕೆ 10 ರೂ. ಏರಿಕೆ
2-4 ಕಿಲೋ ಮೀಟರ್ ಪ್ರಯಾಣಕ್ಕೆ 20 ರೂ. ಏರಿಕೆ
4-6 ಕಿಲೋ ಮೀಟರ್ ಪ್ರಯಾಣಕ್ಕೆ 30 ರೂ. ಏರಿಕೆ
6-8 ಕಿಲೋ ಮೀಟರ್ ಪ್ರಯಾಣಕ್ಕೆ 40 ರೂ. ಏರಿಕೆ
8-10 ಕಿಲೋ ಮೀಟರ್ ಪ್ರಯಾಣಕ್ಕೆ 50 ರೂ. ಏರಿಕೆ
10-15 ಕಿಲೋ ಮೀಟರ್ ಪ್ರಯಾಣಕ್ಕೆ 60 ರೂ. ಏರಿಕೆ
15-20 ಕಿಲೋ ಮೀಟರ್ ಪ್ರಯಾಣಕ್ಕೆ 70 ರೂ. ಏರಿಕೆ
20-25 ಕಿಲೋ ಮೀಟರ್ ಪ್ರಯಾಣಕ್ಕೆ 80 ರೂ. ಏರಿಕೆ
25-30 ಕಿಲೋ ಮೀಟರ್ ಪ್ರಯಾಣಕ್ಕೆ 90 ರೂ. ಏರಿಕೆ
30 ಕಿ.ಮೀ.ಕ್ಕಿಂತ ಹೆಚ್ಚಿನ ಪ್ರಯಾಣಕ್ಕೆ ಟಿಕೆಟ್ ದರ 90 ರೂ
ಸ್ಮಾರ್ಟ್ ಕಾರ್ಡ್ನ ಮೇಲೆ 5 ರೂ. ರಿಯಾಯ್ತಿ ಮುಂದುವರಿಯಲಿದೆ.
ಸ್ಮಾರ್ಟ್ ಕಾರ್ಡ್ನಲ್ಲಿ 50 ರೂ. ಕನಿಷ್ಠ ಹಣ ಇರಬೇಕಿತ್ತು. ಆದರೆ ಈಗ ಕನಿಷ್ಠ 90 ರೂ. ಇರಲೇಬೇಕು. ಆ ಮೂಲಕ 40 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಆಫ್-ಪೀಕ್ ಸಮಯದಲ್ಲಿ ಪ್ರಯಾಣಕ್ಕಾಗಿ ಮೆಟ್ರೋ ವ್ಯವಸ್ಥೆಗೆ ಪ್ರವೇಶಿಸುವ ಸಮಯವನ್ನು ಆಧರಿಸಿ, ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ಶೇ.5 ರಿಯಾಯಿತಿ ಶೇ.5 ಪೀಕ್ ಅವರ್ +ಶೇ.5 ಆಫ್ ಪೀಕ್ ಅವರ್-ಒಟ್ಟು ಶೇ. 10 ರಿಯಾಯಿತಿ ನೀಡಲಾಗಿದೆ.
ಆಫ್-ಪೀಕ್ ಸಮಯ:
ವಾರದ ದಿನಗಳಲ್ಲಿ, ಬೆಳಗೆ ಕಾರ್ಯಾಚರಣೆ ಆರಂಭದಿಂದ 8 ಗಂಟೆಯವರೆಗೆ, ಮಧ್ಯಾಹ 12 ಗಂಟೆಯಿಂದ 4 ಗಂಟೆಯವರೆಗೆ ಮತ್ತು ರಾತ್ರಿ 9 ಗಂಟೆಯಿಂದ ಕಾರ್ಯಾಚರಣೆ ಮುಕ್ತಾಯದವರೆಗೆ. ಎಲ್ಲಾ ಭಾನುವಾರ ಮತ್ತು ರಾಷ್ಟ್ರೀಯ ರಜಾದಿನಗಳಲ್ಲಿ (ಜನವರಿ 26, ಆಗಸ್ಟ್ 15, ಅಕ್ಟೋಬರ್ 02) ದಿನವಿಡೀ ಏಕರೂಪವಾಗಿ ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ.10% ರಿಯಾಯಿತಿ ನೀಡಲಾಗಿದೆ.


Delhi assembly elections ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ
Delhi Assembly Election Result ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ