newsics.com
ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಬಸ್‌ನ್ನು ಚಾಲಕ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಹೊರಗಿಳಿಸಿದ್ದಾರೆ.
ಕೆಲವೇ ಸಮಯದಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಬಸ್ಸು ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರ ಬಟ್ಟೆ ಬರೆ, ಡೆಕೋರೇಷನ್ ವಸ್ತುಗಳು, ಬಸ್ಸಿನ ಬಿಡಿ ಭಾಗಗಳು ಸೇರಿದಂತೆ ಇತರೆ ವಸ್ತುಗಳು ನಾಶವಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಾಗಲೇ ಬಸ್ಸು ಬಹುತೇಕ ಸುಟ್ಟು ಕರಕಲಾಗಿತ್ತು. ಘಟನೆಯಿಂದಾಗಿ ಸುಮಾರು 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Life style ಬಣ್ಣ ಮಾಸದಂತೆ ಮನೆಯಲ್ಲೇ ರೇಷ್ಮೆ ಸೀರೆ ಈ ರೀತಿ ಕ್ಲೀನ್ ಮಾಡಿ