Heart attack ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವಾಗಲೇ ಕುಸಿದು ಕೊನೆಯುಸಿರೆಳೆದ ಯುವತಿ, ವೈರಲ್ ವಿಡಿಯೋ ನೋಡಿ

newsics.com ವಿದಿಶಾ(ಮಧ್ಯಪ್ರದೇಶ): ತನ್ನ ಸಹೋದರಿಯ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿದ್ದ 25 ವರ್ಷದ ಯುವತಿಯೊಬ್ಬಳು ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಮೃತಪಟ್ಟ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದೆ. ಆಶಾ ಭೋಸ್ಲೆ ಹಾಗೂ ಸೋನು ನಿಗಮ್ ಹಾಡಿರುವ ಶರಾರಾ ಶರಾರಾ ಹಿಂದಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿದ್ದು, ಹಠಾತ್ ಕುಸಿದುಬಿದ್ದಿದ್ದಾಳೆ. ತಕ್ಷಣ ಸಂಬಂಧಿಕರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಾಗಲೇ ಯುವತಿ ಕೊನೆಯುಸಿರೆಳೆದಿದ್ದಳು. ಡ್ಯಾನ್ಸ್ ಮಾಡುವ ಹಾಗೂ ಕುಸಿದುಬೀಳುವ ದೃಶ್ಯ ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ. https://twitter.com/i/status/1888587997026607401