Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ
ಕರ್ನಾಟಕಪ್ರಮುಖ

Temperature ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ರಣ ಬಿಸಿಲು: ಮೇನಲ್ಲಿ ಗರಿಷ್ಠ 39 ಡಿ.ಸೆ. ತಾಪ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಾದ್ಯಂತ ಮೈಸುಡುವ ಬಿಸಿಲು ಕಂಡು ಬರುತ್ತಿದ್ದು, ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಪ್ರಮಾಣ ಏರಿಕೆ ಆಗುತ್ತಿದೆ. ಕಳೆದ ಎರಡು ವಾರಗಳ ಹಿಂದೆ ಚಳಿಗೆ ನಡಗುತ್ತಿದ್ದ ಜನರು ಇದೀಗ ಬಿಸಿಲಿಗೆ ತತ್ತರಿಸುತ್ತಿದ್ದಾರೆ. ಕನಿಷ್ಠ ತಾಪಮಾನ ಸಾಮಾನ್ಯವಾಗಿದ್ದರೆ, ಗರಿಷ್ಠ ತಾಪಮಾನ ಕೆಲ ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಹವಾಮಾನ ವೈಪರೀತ್ಯದಿಂದ ಈ ಬಾರಿ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ತಾಪಮಾನವು ದಾಖಲಾಗುವ ಸಾಧ್ಯತೆಗಳಿವೆ. ಗಾಳಿಯಲ್ಲಿ ತೇವಾಂಶ ಕಡಿಮೆಯಾಗಿರುವುದು, ಮಳೆಯ ಪ್ರಮಾಣ ಕಡಿಮೆಯಾಗಿರುವುದು ಸೇರಿದಂತೆ ಇನ್ನೀತರ ಕಾರಣಗಳಿಂದ ಬೆಂಗಳೂರಿನಲ್ಲಿ ಈ ಬಾರಿ ಬೇಸಿಗೆಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ನಿರೀಕ್ಷಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಗರಿಷ್ಠ ಉಷ್ಣಾಂಶವು 39 ಡಿ.ಸೆ.ವರೆಗೂ ಏರಿಕೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು, ಬೆಂಗಳೂರಿನಲ್ಲಿ ಈ ಬಾರಿ ಏಪ್ರಿಲ್‌ ಹಾಗೂ ಮೇನಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯವಾಗಿ 36 ರಿಂದ 38 ಡಿ.ಸೆ.ವರೆಗೂ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕೆಲವೊಮ್ಮೆ ಇದರ ಪ್ರಮಾಣ 39 ಡಿ.ಸೆ. ವರೆಗೂ ಏರಿಕೆಯಾಗಬಹುದು ಎಂದು ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33ರಿಂದ 35 ಡಿ.ಸೆ
ಇನ್ನು ಮುಂದಿನ 7 ದಿನಗಳವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ 7 ದಿನಗಳವರೆಗೆ ಗರಿಷ್ಠ ಉಷ್ಣಾಂಶವು 31 ಡಿ.ಸೆ.ಯಿಂದ 33 ಡಿ.ಸೆ ಇರುವ ಹೆಚ್ಚಿನ ಸಾಧ್ಯತೆಗಳಿವೆ. ಕಲಬುರಗಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶವು ಸುಮಾರು 31 ರಿಂದ 37 ಡಿ.ಸೆ. ಇರುವ ಸಾಧ್ಯತೆಗಳಿವೆ.

TAGGED:Temperature Even before the start of summerthe state is sunny: the maximum is 39 degrees Celsius in May. Temperature possibility
Share This Article
Facebook Twitter Copy Link Print
Previous Article Operation Devil Hunt ಆಪರೇಷನ್ ಡೆವಿಲ್ ಹಂಟ್ ಮೂಲಕ 1,308 ಜನ ಅರೆಸ್ಟ್
Next Article Father killed a son ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನೇ ಕೊಂದ ತಂದೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?