newsics.com
ಶಿವಮೊಗ್ಗ: ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ ಶಬ್ದಗಳಿಂದ ಬೈದರಿರುವ ವಿಡಿಯೋ ವೈರಲ್ ಆಗಿದೆ.
ಭದ್ರಾವತಿ ಬಳಿಯ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ಅವರು ಮಧ್ಯರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಶಾಸಕರ ಪುತ್ರ ಮೊಬೈಲ್ ನಲ್ಲಿ, ಜ್ಯೋತಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಮಹಿಳಾ ಅಧಿಕಾರಿಗೆ ನಿಂದಿಸಿದ ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಘಟನೆಯನ್ನು ಖಂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.