newsics.com
ಬೆಂಗಳೂರು: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆಯಾಗಿದೆ.
ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು 88,500 ಸಾವಿರ ರೂ ಮುಟ್ಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ.
ಚಿನ್ನದ ಬೆಲೆ ನಾಗಾಲೋಟದಲ್ಲಿದೆ. ನಿನ್ನೆ 35 ರೂ. ಏರಿದ್ದ ಅದರ ಬೆಲೆ ಇವತ್ತು ಮಂಗಳವಾರ 80 ರೂ ಹೆಚ್ಚಳ ಕಂಡಿದೆ. ಅಪರಂಜಿ ಚಿನ್ನದ ಬೆಲೆ 87 ರೂನಷ್ಟು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,980 ರೂನಿಂದ 8,060 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,800 ರು ಸಮೀಪಕ್ಕೆ ದೌಡಾಯಿಸಿದೆ. ಭಾರತದಂತೆ ಪಶ್ಚಿಮ ಏಷ್ಯನ್ ದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಯುಎಇ, ಕತಾರ್, ಓಮನ್, ಸೌದಿ ಮೊದಲಾದ ದೇಶಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಿದೆ.
ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಅಲ್ಪ ಇಳಿಕೆ ಕಂಡಿದೆ. ಗ್ರಾಮ್ಗೆ 10 ಪೈಸೆಯಷ್ಟು ಬೆಲೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99.50 ರೂ ಇದ್ದದ್ದು 99.40 ರೂ.ಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 80,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 87,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,940 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,940 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರವರಿ 11ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,600 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,930 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,600 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,930 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ.
Valentine’s Day Offer ರಿಲಯನ್ಸ್ ಜ್ಯುವೆಲ್ಸ್ ತಂದಿದೆ ‘ವ್ಯಾಲೆಂಟೈನ್ಸ್ ಡೇ ಕೊಡುಗೆ