newsics.com
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ತಪಾಸಣೆ ವೇಳೆ ಐಇಡಿ ಸ್ಫೋಟವಾದ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಅಕ್ನೂರ್ ಸೆಕ್ಟರ್ನಲ್ಲಿ ಮಂಗಳವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಈ ದುರಂತವ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಅಖ್ನೂರ್ ಸೆಕ್ಟರ್ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಹುತಾತ್ಮ ಸೈನಿಕರ ಗುರುತನ್ನು ಖಚಿತಪಡಿಸಲಾಗುತ್ತಿದೆ. ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಪ್ರದೇಶಕ್ಕೆ ರವಾನಿಸಲಾಗಿದ್ದು, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.