Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Aero India ಅಂದು ಏರೋ ಇಂಡಿಯಾ ನೋಡಲು ಹೋಗಿದ್ದವ ಈಗ ಸೂರ್ಯಕಿರಣ್ ವಿಂಗ್ ಕಮಾಂಡರ್!
ದೇಶಪ್ರಮುಖ

Aero India ಅಂದು ಏರೋ ಇಂಡಿಯಾ ನೋಡಲು ಹೋಗಿದ್ದವ ಈಗ ಸೂರ್ಯಕಿರಣ್ ವಿಂಗ್ ಕಮಾಂಡರ್!

Share
1 Min Read
SHARE

newsics.com

ಬೆಂಗಳೂರು: ಅಂದು‌ ಪೋಷಕರೊಂದಿಗೆ ಏರೋ ಇಂಡಿಯಾ ನೋಡಲು ಬಂದಿದ್ದ ಬಾಲಕ ಈಗ ಸೂರ್ಯಕಿರಣ್‌ ವೈಮಾನಿಕ ಪ್ರದರ್ಶನ ತಂಡದ ವಿಂಗ್‌ ಕಮಾಂಡರ್‌ ಆಗಿದ್ದಾರೆ.

ಬೆಂಗಳೂರಿನಲ್ಲಿ 1998ರಲ್ಲಿ ಏರೋ ಇಂಡಿಯಾ ನೋಡಲು ಪೋಷಕರೊಂದಿಗೆ ಬಂದಿದ್ದ ಆರನೇ ತರಗತಿಯ ಬೆಂಗಳೂರಿನ ಹುಡುಗ ಅಂದು ಪಣ ತೊಟ್ಟ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ.

ಬೆಂಗಳೂರಿನ ಜಯಮಹಲ್‌ನ ನಂದಿದುರ್ಗ ರಸ್ತೆಯಲ್ಲಿ ಪೇಪರ್‌ ವಿಮಾನ ಹಾರಿಸುತ್ತಾ ಬೆಳೆದ ಅರ್ಜುನ್‌ ಈಗ ಯುದ್ಧ ವಿಮಾನದಲ್ಲಿ ಅತ್ಯಂತ ಕಠಿಣ ಸ್ಟಂಟ್‌ಗಳನ್ನು ಮಾಡುವ ಫೈಟರ್‌ ಜೆಟ್‌ ಪೈಲಟ್‌.

ನಾನು ಬೆಂಗಳೂರಿಗ. ಆರ್‌.ಟಿ. ನಗರದ ಪ್ರೆಸಿಡೆನ್ಸಿ ಶಾಲೆ ಹಾಗೂ ಸೇಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಬಳಿಕ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ಸೇರಿದೆ.

1998ರಲ್ಲಿ ಪೋಷಕರ ಜತೆ ಬೆಂಗಳೂರು ಏರೋ ಇಂಡಿಯಾಗೆ ತೆರಳಿದ್ದೆ. ಆಗ ಸಿಂಗಲ್‌ ಏರ್‌ಕ್ರ್ಯಾಫ್ಟ್‌ ಹಾರಾಟ, ಗ್ರೂಪ್‌ ಫಾರ್ಮೆಷನ್ಸ್‌ ನೋಡಿ ಥ್ರಿಲ್ಲಾಗಿದ್ದೆ. ನನಗೂ ಈ ರೀತಿ ಪೈಲಟ್‌ ಆಗಬೇಕು ಎಂಬ ಆಸೆ ಹುಟ್ಟಿತು. ಅಂದಿನಿಂದ ಅದನ್ನೇ ಪ್ಯಾಷನ್‌ ಆಗಿ ಸ್ವೀಕರಿಸಿದ್ದೆ.

ನಾನು ಪಿಯು ಶಿಕ್ಷಣ ಮುಗಿಸಿ ಎನ್‌ಡಿಎ ಸೇರ್ಪಡೆಯಾದೆ. ಬಳಿಕ ಯುದ್ಧ ವಿಮಾನ ನಡೆಸಲು ಬೀದರ್‌ನಲ್ಲಿ ತರಬೇತಿ ನೀಡುತ್ತಾರೆ. ಅದನ್ನು ಮುಗಿಸಿ ಹೈದಬಾದ್‌ನ ಐಎಫ್‌ಎನಲ್ಲಿ ತರಬೇತಿ ಪಡೆದು ವಾಯುಸೇನೆಗೆ ಸೇರ್ಪಡೆಯಾದೆ. 1,000 ಗಂಟೆಗಳ ಹಾರಾಟ ಅನುಭವದ ಬಳಿಕ ಸೂರ್ಯಕಿರಣ್‌ ತಂಡದ ಕದ ತಟ್ಟಿದೆ.

ಸೂರ್ಯಕಿರಣ್‌ ತಂಡ ಸೇರಲು ಕನಿಷ್ಠ ಅರ್ಹತೆ 1000 ಗಂಟೆಗಳ ಯುದ್ಧ ವಿಮಾನದ ಹಾರಾಟ. ಅಲ್ಲದೆ ಫೈಟರ್‌ ಇನ್‌ಸ್ಟ್ರಕ್ಟರ್‌, ಎಕ್ಸಾಮಿನರ್‌ ಆಗಿ ಅನುಭವ ಪಡೆಯಬೇಕು. ಬಳಿಕ ನಿಮಗೆ ಆಸಕ್ತಿ ಇದ್ದರೆ ಹೋಗಿ ಅಪ್ರೋಚ್ ಆಗಬಹುದು. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇರುತ್ತದೆ. ಎಲ್ಲಾ ರೀತಿಯಲ್ಲೂ ಪರೀಕ್ಷೆ ನಡೆಸಿ ನಿಮ್ಮ ಶಿಸ್ತು, ಬದ್ಧತೆ, ಕಾರ್ಯಕ್ಷಮತೆ ಎಲ್ಲವನ್ನೂ ಪರಿಶೀಲಿಸಿ ಆರು ತಿಂಗಳ ತರಬೇತಿಗೆ ನೇಮಿಸಿಕೊಳ್ಳುತ್ತಾರೆ. ಬಳಿಕ ಆಯ್ಕೆ ಮಾಡುತ್ತಾರೆ.

Costly cow| 40 ಕೋಟಿಗೆ ಮಾರಾಟವಾಯ್ತು ಈ ಹಸು!

Infosys ನೂರಾರು ಉದ್ಯೋಗಿಗಳ‌ ವಜಾ: ಇನ್ಫೋಸಿಸ್ ನಡೆ ವಿರುದ್ಧ ಆಕ್ರೋಶ

TAGGED:Suryakiran Wing Commander is now the one who went to see Aero India!
Share This Article
Facebook Twitter Copy Link Print
Previous Article Today’s Prediction | ಶುಭ ದಿನ, 12-02-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Rahul Gandhi ರಾಹುಲ್ ಗಾಂಧಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?