newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ.
ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದ್ಯಮಿ, ಮಹೀಂದ್ರ & ಮಹೀಂದ್ರ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರ ಅವರು ಬೆಂಗಳೂರಿನ ಟ್ರಾಫಿಕ್ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ತಮಾಷೆಯಾಗಿ ಬರೆದುಕೊಂಡಿದ್ದಾರೆ
ಸಮಾವೇಶದಲ್ಲಿ ಪಾಲ್ಗೊಂಡು ಬೆಂಗಳೂರಿನಿಂದ ಹೊರಟ ಅವರು, ʼʼಗುಡ್ ಬೈ ಬೆಂಗಳೂರು…ನನ್ನ ಮಹೀಂದ್ರ ಬಿಇ-6 ಕಾರಿನ ವೇಗಕ್ಕೆ ಥ್ಯಾಂಕ್ಸ್. ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವುದರ ಅನುಕೂಲವೆಂದರೆ ವಾಹನಗಳು ಶೋರೂಂನಲ್ಲಿ ಇರುವಂತೆ ಇರುತ್ತವೆ. ಅಲ್ಲದೆ ಟ್ರಾಫಿಕ್‌ನಲ್ಲಿ ಸಿಲುಕಿರುವ ಪ್ರತಿಯೊಬ್ಬರೂ ಪಕ್ಕದ ಕಾರು, ಮಾಡೆಲ್ ನೋಡಲು ಮತ್ತು ಪರೀಕ್ಷಿಸಲು ಸಾಕಷ್ಟು ಸಮಯವಿರುತ್ತದೆʼʼ ಎಂದು ಬರೆದುಕೊಂಡಿದ್ದಾರೆ.
ಆನಂದ್ ಮಹೀಂದ್ರಾ ಅವರು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿ ಇರುತ್ತಾರೆ. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅವರು ಭಾಗವಹಿಸಿದ್ದು. ಇಲ್ಲಿಂದ ಹೋಗುವಾಗ ಅವರು ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಲ್ಲಿಗೆ ಬರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಆದರೆ ಟ್ರಾಫಿಕ್ ಜಾಮ್ ಸಮಸ್ಯೆಗೆ ಮಾತ್ರ ಮುಕ್ತಿ ಸಿಗುತ್ತಿಲ್ಲ.