newsics.com
ನವದೆಹಲಿ: ಇಲ್ಲಿನ ಪಾಟಿಯಾಲ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಗಾಯಗೊಂಡಿದ್ದಾರೆ.
ಕುರುಬೂರು ಶಾಂತಕುಮಾರ್ ಅಲ್ಲದೆ ತಮಿಳುನಾಡಿನ ಪಾಂಡಿಯನ್ ಎಂಬುವರೂ ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ದೆಹಲಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ರೈತ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲು ಕುರುಬೂರು ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು.
ಈ ವೇಳೆ ಪಾಟಿಯಾಲದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಳೆದ ಒಂದು ವರ್ಷದಿಂದ ದೆಹಲಿಯ ಕರ್ನೂಲಿ ಗಡಿಯಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಕುರುಬೂರು ಶಾಂತಕುಮಾರ್ ತೆರಳುತ್ತಿದ್ದರು.
First night with donkey ಈ ದೇಶದಲ್ಲಿ ಮೊದಲು ಕತ್ತೆ ಜತೆ ಫಸ್ಟ್ ನೈಟ್!
Viral video ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ
Bengaluru Traffic Jam: ಗುಡ್ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!