Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಮಾಘ ಮಾಸ ಕೃಷ್ಣ ಪಕ್ಷ ತೃತೀಯಾ, 15-02-2025, ಶನಿವಾರ
ಈ ದಿನಪಂಚಾಂಗಪ್ರಮುಖ

GOOD MORNING ಶುಭೋದಯ, ಮಾಘ ಮಾಸ ಕೃಷ್ಣ ಪಕ್ಷ ತೃತೀಯಾ, 15-02-2025, ಶನಿವಾರ

Share
3 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಮಾಘ ಮಾಸ ಕೃಷ್ಣ ಪಕ್ಷ ತೃತೀಯಾ/ ತದಿಗೆ

15-02-2025, ಶನಿವಾರ

# ಶೃಂಗೇರಿ ಶ್ರೀ ಶಾರದಾ ಪರಮೇಶ್ವರಿ ರಥೋತ್ಸವ

# ಯಲಗೂರು ಪ್ರಾಣೇಶ ಕಾರ್ತಿಕೋತ್ಸವ

# ಸಂತ ಸೇವಾಲಾಲ್ ಮಹಾರಾಜ ಜಯಂತಿ

—
ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 15/02/2025
ತಿಂಗಳು – ಫೆಬ್ರವರಿ
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ ತೃತೀಯ 23:51:46
ಪಕ್ಷ ಕೃಷ್ಣ
ನಕ್ಷತ್ರ ಉತ್ತರ ಫಾಲ್ಗುಣಿ 25:38:23*
ಯೋಗ ಸುಕರ್ಮ 07:31:20
ಕರಣ ವಾಣಿಜ 10:48:21
ಕರಣ ವಿಷ್ಟಿ (ಭದ್ರ) 23:51:46

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ ಕನ್ಯಾ
ಸೂರ್ಯ ರಾಶಿ ಕುಂಭ
ಋತು ಶಿಶಿರ

ಸೂರ್ಯೋದಯ 06:43:12
ಸೂರ್ಯಾಸ್ತ 18:24:24
ಹಗಲಿನ ಅವಧಿ 11:41:12
ರಾತ್ರಿಯ ಅವಧಿ 12:18:24
ಚಂದ್ರಾಸ್ತ 08:23:54
ಚಂದ್ರೋದಯ 20:42:52

ರಾಹು ಕಾಲ 09:39 – 11:06 ಅಶುಭ
ಯಮಘಂಡ ಕಾಲ 14:01 – 15:29 ಅಶುಭ
ಗುಳಿಕ ಕಾಲ 06:43 – 08:11
ಅಭಿಜಿತ್ 12:10 – 12:57 ಶುಭ
ದುರ್ಮುಹೂರ್ತ 08:17 – 09:03 ಅಶುಭ

—

ಇಂದಿನ ಮಾತು

ಅವರಿಷ್ಟರಂತೆ ನಾವಿಲ್ಲದಿದ್ದರೆ ನಾವು ಎಷ್ಟೇ ಒಳ್ಳೆಯವರಾದರೂ ಕೆಟ್ಟವರೇ!.

—

ಇಂದಿನ ಸುಭಾಷಿತ

ಉಪರ್ಯುಪರಿ ಲೋಕಸ್ಯ
ಸರ್ವೋ ಭವಿತುಮಿಚ್ಛತಿ |
ಯತತೇ ಚ ಯಥಾಶಕ್ತಿ
ನ ಚ ತದ್ವರ್ತತೇ ತಥಾ ||
(ಸುಭಾಷಿತ ಸುಧಾನಿಧಿ)

ಎಲ್ಲರೂ ಲೋಕವನ್ನೇ ಮೀರಿಸಿ ಮೇಲೆಮೇಲಿರಲು ಬಯಸುತ್ತಾರೆ. ತಮ್ಮ ಶಕ್ತಿಗನುಗುಣವಾಗಿ ಪ್ರಯತ್ನಿಸುತ್ತಾರೆ. ಆದರೆ ಹಾಗೆ ಮಾತ್ರ ಆಗುವುದಿಲ್ಲ.

—

ಇಂದಿನ ಪದಾರ್ಥ

ಅಡಾಯುಧ = ಅಡ್ಡಾಯುಧ, A sword with a recurved point, ಅಡ್ಡಣಿಗೆ = A small wooden or metal three legged stand.

—

ಇಂದಿನ ಓದು

ಓಂ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ ||1||

5.ಭೂತಕೃತ್

ಸಂಸ್ಕೃತದಲ್ಲಿ ಕೃತ್ ಅನ್ನುವ ಪದಕ್ಕೆ ಎರಡು ಅರ್ಥವಿದೆ.
೧. ಸೃಷ್ಟಿ
೨. ಸಂಹಾರ
ಅದೇ ರೀತಿ ಭೂತಗಳಲ್ಲಿ ಎರಡು ವಿಧ
೧. ಅಚೇತನ ಭೂತ ಅಂದರೆ ಪಂಚಭೂತಗಳು (ಮಣ್ಣು ,ಬೆಂಕಿ, ನೀರು, ಗಾಳಿ ಮತ್ತು ಆಕಾಶ)
೨. ಚೇತನ ಭೂತ ಅಂದರೆ ಪಂಚಭೂತಗಳಿಂದ ಆದ ಜೀವಗಳು.
ಭೂತಕೃತ್ (ಸೃಷ್ಟಿ) ಅಂದರೆ ಪಂಚಭೂತಗಳ ಸೃಷ್ಟಿಕರ್ತ, ಪಂಚಭೂತಾತ್ಮಕವಾದ ಬ್ರಹ್ಮಾಂಡದ ಸೃಷ್ಟಿಕರ್ತ. ಬ್ರಹ್ಮಾಂಡದಲ್ಲಿ ಪಂಚಭೂತಗಳಿಂದಾದ ಪಿಂಡಾಂಡ ಸೃಷ್ಟಿ ಮಾಡಿದವ , ಪಿಂಡಾಂಡದಲ್ಲಿ ಜೀವವನ್ನು ಇರಿಸಿ ದೇಹ ಸೃಷ್ಟಿ ಮಾಡಿದವ, ಮತ್ತು ಸಾಧನೆ ಮೂಲಕ ಜೀವರಿಗೆ ಮುಕ್ತಿಯನ್ನು ಕರುಣಿಸುವವ.
ಭೂತಕೃತ್ (ಸಂಹಾರ) ಅಂದರೆ ದೇಹ ನಾಶದ ಮೂಲಕ ಜೀವರನ್ನು ನಾಶ ಮಾಡುವವ, ಅಭಿವೃದ್ಧಿ ಹೊಂದದ ತಾಮಸ ಜೀವರನ್ನು ನಾಶ ಮಾಡುವವ, ಪಂಚಭೂತಾತ್ಮಕವಾದ ಶರೀರ ನಾಶ ಮಾಡುವವ, ಪಂಚಭೂತಾತ್ಮಕವಾದ ಬ್ರಹ್ಮಾಂಡ ನಾಶ ಮಾಡಿದವ , ಪ್ರಳಯ ಕಾಲದಲ್ಲಿ ಪಂಚಭೂತಗಳನ್ನೂ ನಾಶ ಮಾಡುವವ

—

ಓಂ ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ ||1||

6) ಭೂತಭೃತ್

ಸೃಷ್ಟಿ-ಸ್ಥಿತಿ-ಲಯದಲ್ಲಿ ಪಂಚಭೂತಗಳ ಧಾರಣೆ ಮಾಡುವವ,ಪಂಚಭೂತಾತ್ಮಕವಾದ ಬ್ರಹ್ಮಾಂಡ ಧಾರಣೆ ಮಾಡುವವ, ಪಂಚಭೂತಗಳಿಂದಾದ ಪಿಂಡಾಂಡ ಧಾರಣೆ ಮಾಡುವವ, ಪಿಂಡಾಂಡದಲ್ಲಿರುವ ಜೀವವನ್ನು ಧಾರಣೆ ಮಾಡುವವ ಮತ್ತು ಮುಕ್ತಿಯನ್ನು ಪಡೆದ ಜೀವವನ್ನು ಧಾರಣೆ ಮಾಡುವವ.

7) ಭಾವಃ
ಸೃಷ್ಟಿ-ಸ್ಥಿತಿ-ಲಯ ಇದು ಭಗವಂತನ ಗುಣ. ಆತ ಸಚ್ಚಿದಾನ೦ದ. ಹುಟ್ಟು-ಸಾವು ನೈಸರ್ಗಿಕ ಕ್ರಿಯೆ. ಸಾವು ಹುಟ್ಟಿನ ಮೂಲ, ಹುಟ್ಟು ಸಾವಿನ ಮೂಲ. ಭಗವಂತ ಎಂದೆಂದಿಗೂ ಶಾಶ್ವತವಾಗಿ ಇರುವವನು. ಭಾವ ಅಂದರೆ ಸಚ್ಚಿದಾನ೦ದ ಸ್ವರೂಪ.
8) ಭೂತಾತ್ಮಾ
ಪಂಚಭೂತಗಳಲ್ಲಿ ವ್ಯಾಪಿಸಿದವ, ಬ್ರಹ್ಮಾಂಡದಲ್ಲಿ ವ್ಯಾಪಿಸಿದವ, ಪಿಂಡಾಂಡದಲ್ಲಿ ತುಂಬಿರುವವ,ಎಲ್ಲಾ ಜೀವದಲ್ಲಿ ಅಂತರ್ಯಾಮಿ ಆಗಿ ತುಂಬಿರುವವ. ಭೂತಿಯನ್ನು( ಉನ್ನತಿ) ಹೊಂದಿದ ಜೀವಿಗಳಿಗೆ ಮುಕ್ತಿಯನ್ನು ಕರುಣಿಸುವ ಭಗವಂತ ಭೂತಾತ್ಮ.
9) ಭೂತಭಾವನಃ
ಸೃಷ್ಟಿ-ಸ್ಥಿತಿ-ಸಂಹಾರಗಳಿಗೆ ಕಾರಣವಾದವ, ಜೀವಿಗಳಿಗೆ ಸುಖ-ದುಃಖ ಕೊಡುವವ-ಭೂತಭಾವನಃ

—

ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂ ಪರಮಾ ಗತಿಃ |
ಅವ್ಯಯಃ ಪುರುಷಃ ಸಾಕ್ಷೀ ಕ್ಷೇತ್ರಜ್ಞೋsಕ್ಷರ ಏವ ಚ || 2 ||

10) ಪೂತಾತ್ಮಾ

ದ್ವೇಷಗಳ, ತ್ರಿಗುಣಗಳ ಸ್ಪರ್ಶವಿಲ್ಲದ ಪವಿತ್ರ ಸ್ವರೂಪನಾದ ಭಗವಂತ ಪೂತಾತ್ಮಾ.

11) ಪರಮಾತ್ಮಾ
ಆತ್ಮ ಅಂದರೆ – ದೇಹ? ಅಲ್ಲ ! ಭಾವನೆಗಳ ಗೂಡಾದ ಮನಸ್ಸು? ಅದೂ ಅಲ್ಲ !! ಏಕೆಂದರೆ ಮನಸ್ಸಿನಿಂದ ಯೋಚಿಸುವುದರಿಂದ ಮನಸ್ಸನ್ನು ನಿಯಂತ್ರಿಸುವವ ಯಾರು? ಅದೇ ಜೀವ. ಆದರೆ ಈ ಜೀವವನ್ನು ನಿಯಂತ್ರಿಸುವ ಶಕ್ತಿ ಯಾವುದು? ಆತನೇ-ಪರಮಾತ್ಮ. ಎಲ್ಲಾ ಆತ್ಮಗಳಿಗೂ ಪರಮವಾದ ಆತ್ಮ, ಬ್ರಹ್ಮಾದಿ ಸಕಲ ಚೇತನಗಳಿಗೂ ಹಿರಿಯನಾದ ಸ್ವಾಮಿ.

—

TAGGED:15-02-2025Magha Masa Krishna Paksha TaritiyaSaturdayShubhaodaya
Share This Article
Facebook Twitter Copy Link Print
Previous Article ಕಾಂಡೋಮ್ ಬಳಸುವವರು ಖಂಡಿತ ತಿಳಿದುಕೊಳ್ಳಬೇಕಾದ ವಿಷಯಗಳು ಇವು….health tips
Next Article Today’s Prediction ಶುಭ ದಿನ, 15-02-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?