Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > dug a well for Kumbh Mela! ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೋಗಲಾರದ ನೋವು: ಮನೆಯ ಹಿತ್ತಲಲ್ಲೇ 40 ಅಡಿ ಬಾವಿ ತೋಡಿದ ಶಿರಸಿ ಮಹಿಳೆ!
ಅನಾವರಣಕರ್ನಾಟಕಪ್ರಮುಖ

dug a well for Kumbh Mela! ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೋಗಲಾರದ ನೋವು: ಮನೆಯ ಹಿತ್ತಲಲ್ಲೇ 40 ಅಡಿ ಬಾವಿ ತೋಡಿದ ಶಿರಸಿ ಮಹಿಳೆ!

Share
2 Min Read
SHARE

newsics.com

ಶಿರಸಿ(ಉತ್ತರ ಕನ್ನಡ): ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಅರಿತ ಶಿರಸಿಯ ಮಹಿಳೆಯೊಬ್ಬರು ಮನೆ ಹಿತ್ತಲಲ್ಲೇ ಒಬ್ಬಂಟಿಯಾಗಿ 40 ಅಡಿ ಬಾವಿ ತೋಡಿ ‘ಗಂಗಾ’ ಜಲ ಸೃಷ್ಟಿಸಿಕೊಂಡಿದ್ದಾರೆ.

ಶಿರಸಿ ಗಣೇಶನಗರ ಸನಿಹದ ನಿವಾಸಿ 57 ವರ್ಷದ ಗೌರಿ ನಾಯ್ಕ್ ಎಂಬುವರೇ ಈ ಅಪರೂಪದ ಸಾಧನೆ ಮಾಡಿದ್ದು, ಶಿವರಾತ್ರಿಯಂದು (ಫೆ.26) ಇದೇ ಬಾವಿಯ ನೀರಲ್ಲಿ ಪುಣ್ಯಸ್ನಾನ ಮಾಡಲು ಸಿದ್ಧರಾಗಿದ್ದಾರೆ.

ಮಹಾಕುಂಭಕ್ಕೆ ಹೋಗಲು ಅದೃಷ್ಟವಂತರಾಗಿರಬೇಕು. ಸಣ್ಣ ಕೃಷಿ ಭೂಮಿ ಇರುವ, ಆದಾಯ ಕಡಿಮೆ ಇರುವ ನನಗೆ ಅದು ಸಾಧ್ಯವಾಗದು. ಅದಕ್ಕಾಗಿ ನಾನು ಇಲ್ಲಿಯೇ ಬಾವಿ ಅಗೆದು ಗಂಗೆಯನ್ನು ತರಲು ನಿರ್ಧರಿಸಿದೆ ಎಂದು ಗೌರಿ ಹೇಳಿದ್ದಾರೆ.

ಗೌರಿ ಸುಮಾರು 40 ಅಡಿವರೆಗೆ ಬಾವಿ ತೋಡಿದ್ದರು. ಬಾವಿಯಲ್ಲಿ ಸಾಕಷ್ಟು ನೀರು ದೊರೆತಿರುವುದಕ್ಕೆ ಸಂತಸಗೊಂಡಿದ್ದಾರೆ.

ಮಹಾ ಶಿವರಾತ್ರಿಯಂದು ನಾನು ಬಾವಿಯ ನೀರಿನಿಂದ ಪುಣ್ಯ ಸ್ನಾನ ಮಾಡಲು ಯೋಜಿಸುತ್ತಿದ್ದೇನೆ ಎಂದು ಗೌರಿ ತಿಳಿಸಿದ್ದಾರೆ.

ಮಹಾಕುಂಭಮೇಳದ ಬಗ್ಗೆ ಡಿಸೆಂಬರ್‌ನಲ್ಲಿ ಗೌರಿ ಅವರಿಗೆ ಮಾಹಿತಿ ಗೊತ್ತಾಗಿತ್ತು. ಆದರೆ ಪ್ರಯಾಗ್‌ರಾಜ್‌ಗೆ ಹೋಗಲು ಹಣವಿಲ್ಲ ಎಂಬ ಅರಿವೂ ಅವರಿಗಿತ್ತು. ಆಗಲೇ ಅವರು ಬಾವಿ ತೋಡಲು ನಿರ್ಧರಿಸಿದರು. ಡಿಸೆಂಬರ್ 15 ರಿಂದಲೇ ಕೆಲಸ ಪ್ರಾರಂಭಿಸಿದ್ದರು.

ಗೌರಿಯ ಸಂಬಂಧಿಕರು ಮತ್ತು ನೆರೆಹೊರೆಯವರು ಹೇಳಿದ ಪ್ರಕಾರ, ಗೌರಿ ದಿನಕ್ಕೆ ಸುಮಾರು 6-8 ಗಂಟೆ ಕಾಲ ಮಣ್ಣನ್ನು ಅಗೆಯುವ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಪ್ರಯತ್ನವನ್ನು ಪ್ರಾರಂಭಿಸಿದ ಎರಡು ತಿಂಗಳ ನಂತರ ಫೆಬ್ರವರಿ 15 ರಂದು ಬಾವಿಯನ್ನು ಪೂರ್ಣಗೊಳಿಸಿದ್ದಾರೆ. ಬಾವಿಯಲ್ಲಿ ನೀರಿನ ಒರತೆಯೂ ಚಿಮ್ಮಿದೆ.

ಗೌರಿಯ ಇಂತಹ ಸಾಧನೆ ಇದೇ ಮೊದಲಲ್ಲ. ಯಾರ ಸಹಾಯವಿಲ್ಲದೆ ಬಾವಿ ತೋಡುವುದು ಗೌರಿಗೆ ಹೊಸದೇನಲ್ಲ. ಅವರು ಈ ಹಿಂದೆಯೂ ನಾಲ್ಕು ಬಾವಿಗಳನ್ನು ತೋಡಿದ್ದಾರೆ. ಒಂದು ಬಾವಿಯನ್ನು ಕೃಷಿಗಾಗಿ ತನ್ನ ಹೊಲದಲ್ಲಿ, ಇನ್ನೊಂದು ತನ್ನ ಹಳ್ಳಿಯ ಜನರ ಬಾಯಾರಿಕೆ ನೀಗಿಸಲು ಮತ್ತು ಮೂರನೆಯ ಬಾವಿಯನ್ನು 2024 ರ ಮಧ್ಯ ಭಾಗದಲ್ಲಿ ಶಿರಸಿಯ ಗಣೇಶ ನಗರ ಅಂಗನವಾಡಿ ಶಾಲೆಗಾಗಿ ನಿರ್ಮಿಸಿದ್ದರು.
ಅಂಗನವಾಡಿಯ ಬಾವಿಯ ಕೆಲಸದ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತವು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಬಾವಿ ತೋಡುವುದನ್ನು ನಿಲ್ಲಿಸುವಂತೆ ಸೂಚನೆ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮೊದಲಿಗೆ ಗೌರಿ ಅವರನ್ನು ಸನ್ಮಾನಿಸಿದರಾದರೂ, ನಂತರ ಬಾವಿ ತೋಡುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದರು. ಆದರೆ ಆಗಿನ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗ್ಡೆ ಅವರ ಬೆಂಬಲದ ನಂತರ ಗೌರಿ ಬಾವಿಯ ನಿರ್ಮಾಣವನ್ನು ಪೂರ್ಣಗೊಳಿಸಿದ್ದರು. ಗೌರಿ ಅವರು ಅಂದು ತೋಡಿದ್ದ 45 ಅಡಿ ಆಳದ ಬಾವಿಯಲ್ಲಿ ಈಗಲೂ ನೀರಿದ್ದು, ಬಳಕೆಯಲ್ಲಿದೆ.

new fastag rules ಇಂದಿನಿಂದ ಹೊಸ FASTag ನಿಯಮ ಜಾರಿ, ಈ ಬಗ್ಗೆ ತಿಳಿದುಕೊಳ್ಳದಿದ್ದರೆ ಅಪಾಯ ನಿಶ್ಚಿತ

TAGGED:Shirsi woman who dug a well in the backyard of the house because there is no money to go to Prayag Raj Kumbh Mela!
Share This Article
Facebook Twitter Copy Link Print
Previous Article new fastag rules ಇಂದಿನಿಂದ ಹೊಸ FASTag ನಿಯಮ ಜಾರಿ, ಈ ಬಗ್ಗೆ ತಿಳಿದುಕೊಳ್ಳದಿದ್ದರೆ ಅಪಾಯ ನಿಶ್ಚಿತ
Next Article Supreme Court judgment ಕೆಲಸದ ಸ್ಥಳದಲ್ಲಿ ಹಿರಿಯರು ಎಚ್ಚರಿಕೆ ನೀಡುವುದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂ ತೀರ್ಪು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?