newsics.com
ನವದೆಹಲಿ: ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡೆಲ್ಟಾ ಏರ್ ಲೈನ್ಸ್ ವಿಮಾನವು ತಲೆಕೆಳಗಾಗಿ ಉರುಳಿ ಬಿದ್ದಿದ್ದು, ಕನಿಷ್ಠ 19 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಮಿನ್ನಿಯಾಪೊಲಿಸ್ನಿಂದ ಡೆಲ್ಟಾ ವಿಮಾನದಲ್ಲಿ “ಘಟನೆ” ಸಂಭವಿಸಿದೆ ಮತ್ತು ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 80 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, 60 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪ್ರತ್ಯೇಕ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.