newsics.com
ಹೈದರಾಬಾದ್: ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡುವುದಕ್ಕೆ ಅವಕಾಶ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶವೀಗ ವಿವಾದಕ್ಕೆ ಕಾರಣವಾಗಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಪವಿತ್ರ ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ ನೀಡಿದೆ.
ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರ ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಚಂದ್ರನ ದರ್ಶನವನ್ನು ಅವಲಂಬಿಸಿ ಮಾರ್ಚ್ 1 ಅಥವಾ 2ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳು 1 ಗಂಟೆ ಮುಂಚಿತವಾಗಿ ಕಚೇರಿ ಬಿಡಲು ಅವಕಾಶವಿದೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಆದೇಶಗಳು ಮುಸ್ಲಿಂ ಶಿಕ್ಷಕರು, ಗುತ್ತಿಗೆ ನೌಕರರು, ಹೊರಗುತ್ತಿಗೆ, ಮಂಡಳಿ ಮತ್ತು ಸಾರ್ವಜನಿಕ ವಲಯದ ಕಾರ್ಮಿಕರಿಗೆ ಅನ್ವಯಿಸುತ್ತವೆ.
ಮುಸ್ಲಿಂ ಸರ್ಕಾರಿ ನೌಕರರು/ ಶಿಕ್ಷಕರು/ ಗುತ್ತಿಗೆ/ ಹೊರಗುತ್ತಿಗೆ/ ಮಂಡಳಿಗಳು/ ನಿಗಮಗಳು ಮತ್ತು ಸಾರ್ವಜನಿಕ ವಲಯದ ನೌಕರರು ಸಂಜೆ 4 ಗಂಟೆಗೆ ತಮ್ಮ ಕಚೇರಿಗಳು ಅಥವಾ ಶಾಲೆಗಳನ್ನು ಬಿಡಲು ಸರ್ಕಾರ ಅನುಮತಿ ನೀಡಿದೆ. “ರಂಜಾನ್” ಪವಿತ್ರ ಮಾಸದಲ್ಲಿ ಅಂದರೆ ಮಾರ್ಚ್ 2ರಿಂದ 31ರವರೆಗೆ ಅಗತ್ಯ ಪ್ರಾರ್ಥನೆಗಳನ್ನು ಸಲ್ಲಿಸಲು 1 ಗಂಟೆ ಮುಂಚಿತವಾಗಿ ತೆರಳಲು ಅವಕಾಶ ನೀಡಲಾಗಿದೆ.