newsics.com
ಕಾರವಾರ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಆರ್ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 4 ವರ್ಷದ ಮಗು ಶ್ರೀಹಾನ್ ಮೃತ ದುರ್ದೈವಿಗಳು.ಎದುರಿನಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.