newsics.com
ಬೆಂಗಳೂರು : ಫೆಬ್ರವರಿ ಆರಂಭದಿಂದಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗಿದ್ದು, ಇನ್ನು ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಯಲುಸೀಮೆ , ಉತ್ತರ ಕರ್ನಾಟಕ ಮಾತ್ರವಲ್ಲದೆ, ಬೆಂಗಳೂರಲ್ಲೂ ಬಿಸಿಲಿನ ಬೇಗೆ ಹೆಚ್ಚಾಗಿದೆ. ಮಾರ್ಚ್ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಹಾಗೂ ಸೆಕೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ ಮೊದಲ ವಾರವೇ 32ರಿಂದ 37 ಡಿಗ್ರಿಯವರೆಗೂ ತಾಪಮಾನ ದಾಖಲಾಗುತ್ತಿದ್ದು, ಬೇಸಿಗೆಕಾಲದಲ್ಲಿ ಅಂದ್ರೆ ಮಾರ್ಚ್ ತಿಂಗಳಲ್ಲಿ ಇನ್ಯಾವ ಪರಿಸ್ಥಿತಿ ಇರುತ್ತೆ ಅನ್ನೋದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ
ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾದರೆ, ಉತ್ತರ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾಗಲಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಪ್ರಮಾಣದಲ್ಲಿ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಬಿಸಿಲತಾಪ ಇನ್ನಷ್ಟು ಹೆಚ್ಚಾಗಲಿದೆ. ಅದರಲ್ಲೂ ಮಾರ್ಚ್ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಆಗ ಬಿಸಿಲು ಹಾಗೂ ಗರಿಷ್ಠಉಷ್ಣಾಂಶ ಇನ್ನಷ್ಟು ಏರಿಕೆ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದು.. ಜನರು ಎಚ್ಚರಿಕೆಯಿಂದಿರುವ ಅಗತ್ಯ ಇದೆ