newsics.com
ಬೆಂಗಳೂರು : ಬಟಾಣಿಗೆ ಕೃತಕ ಬಣ್ಣ ಹಾಕಿ ಮಾರಾಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
ಹಸಿರು ಬಟಾಣಿಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಸುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಭಿತ್ತರವಾಗುತ್ತಿದ್ದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಕರ್ನಾಟಕದಾದ್ಯಂತ ಮಾರಾಟ ಮಾಡಲಾಗುತ್ತಿರುವ ಹಸಿರು ಬಟಾಣಿಗಳ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ವಿಶ್ಲೇಷಣೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲು ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕರಿದ ಬಟಾಣಿಗಳ ಸ್ಯಾಂಪಲ್ಗಳನ್ನ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆಲ ವಲಯದಲ್ಲಿ ಸ್ಯಾಂಪಲ್ ಸಂಗ್ರಹಿಸಿ ಕ್ರಮಕೈಗೊಳ್ಳಲಾಗಿದ್ದು, ಲ್ಯಾಬ್ ವರದಿ ಬಂದ ಬಳಿಕ ಕಲರ್ ಅಳವಡಿಕೆ ನಿಷೇಧಿಸುವ ಆದೇಶ ಸಾಧ್ಯತೆ ಇದೆ.