newsics.com
ಬೆಂಗಳೂರು: ಡಬ್ಲ್ಯುಪಿಎಲ್ ಮೂರನೇ ಆವೃತ್ತಿಯ ಪಂದ್ಯಗಳು ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಇಂದು ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮಹತ್ವದ ಪಂದ್ಯ ನಡೆಯಲಿದ್ದು ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ, ಇಂದು ತನ್ನ ತವರು ಮೈದಾನದಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಎದುರಾಳಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್. ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನತ್ತ ಮುನ್ನುಗ್ಗಲಿದೆ.
ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಇದರ ಟಾಸ್ ಅರ್ಧ ಗಂಟೆ ಮುಂಚಿತವಾಗಿ ಸಂಜೆ 7:00 ಗಂಟೆಗೆ ನಡೆಯಲಿದೆ.
ತಮ್ಮ ತವರು ಮೈದಾನದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಸೀಸನ್‌ನಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಆರ್‌ಸಿಬಿ ಈಗ ಮುಂಬೈ ಇಂಡಿಯನ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನತ್ತ ಗಮನ ಹರಿಸಿದೆ.