newsics.com
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, 200 ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದೆ. ಆದರೆ ಬಿಸಲಿನ ಧಗೆ ಹೆಚ್ಚಿದ್ದರಿಂದ ಬೆಂಕಿ ತೀವ್ರವಾಗಿ ವ್ಯಾಪಿಸಿದೆ. ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ ಎಂದು ಹೇಳಲಾಗುತ್ತಿದೆ.
ಬೆಟ್ಟದ ಅರಣ್ಯ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ಮಾರ್ಗದ ಬೆಟ್ಟದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕಾಡಿನ ಉದ್ದಕ್ಕೂ ಬೆಂಕಿ ವ್ಯಾಪಿಸಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಕಾಡ್ಗಿಚ್ಚಿನಿಂದ ಸಂಭವಿಸಿರುವ ಅವಘಡವೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.