newsics.com
ನವದೆಹಲಿ: ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಅಧಿಸೂಚನೆಯ ಪ್ರಕಾರ ತಿಳಿದು ಬಂದಿದೆ.
ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರ ಮುಂದಿನ ಆದೇಶದವರೆಗೆ ಮಾಜಿ ಆರ್‌ಬಿಐ ಗವರ್ನರ್ ಅವರು ಈ ಅವಧಿಯಲ್ಲಿ ಮುಂದುವರಿಯುತ್ತಾರೆ.
ಶನಿವಾರದ ಅಧಿಸೂಚನೆಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ-2 ಆಗಿ ಸರ್ಕಾರ ನೇಮಿಸಿದೆ ಎಂದು ಹೇಳಲಾಗಿದೆ.