newsics.com
ನವದೆಹಲಿ : ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಔಟಾದ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದರು.
111 ಎಸೆತಗಳಲ್ಲಿ 7 ಫೋರ್ ಸಮೇತ ಅಜೇಯ 100 ರನ್ ಚಚ್ಚಿದ್ರು. ಇವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ 90ಕ್ಕೂ ಹೆಚ್ಚಿತ್ತು.
ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ತಾನು ಆಡಿರೋ 287 ಏಕದಿನ ಇನ್ನಿಂಗ್ಸ್ನಲ್ಲಿ 14 ಸಾವಿರ ರನ್ ಪೂರೈಸಿದ್ದಾರೆ. ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲೇ ಕೊಹ್ಲಿ ಈ ದಾಖಲೆ ಸೃಷ್ಟಿಸಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಬ್ಯಾಟರ್. ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳನ್ನು ಹಿಂದಿಕ್ಕುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 51 ಶತಕಗಳು ಮತ್ತು 72 ಅರ್ಧಶತಕಗಳನ್ನು ಬಾರಿಸಿದ್ದಾರೆ.